Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುವ ವ್ಯವಹಾರಗಳ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಮೊಜಾಂಬಿಕ್ ನಡುವಿನ ತಿಳಿವಳಿಕೆ ಒಪ್ಪಂದದ ಬಗ್ಗೆ ಸಚಿವ ಸಂಪುಟಕ್ಕೆ ವಿವರಣೆ


ಪ್ರಧಾನಮಂತ್ರಿಯವರು ಮೊಜಾಂಬಿಕ್ ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2016ರ ಜುಲೈ 7ರಂದು ಭಾರತ ಮತ್ತು ಮೊಜಾಂಬಿಕ್ ನಡುವೆ ಯುವ ವ್ಯವಹಾರ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಅಂಕಿತ ಹಾಕಲಾದ ತಿಳಿವಳಿಕೆ ಒಪ್ಪಂದದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ ವಿವರ ನೀಡಲಾಯಿತು.

ಈ ತಿಳಿವಳಿಕೆ ಒಪ್ಪಂದವು ಎರಡೂ ರಾಷ್ಟ್ರಗಳ ನಡುವೆ ಕ್ರೀಡೆಯ ಉತ್ತೇಜನಕ್ಕೆ ಸಹಕಾರಿಯಾಗಿದ್ದು, ಯುವಕರ ಕಲ್ಪನೆಗಳ, ಮೌಲ್ಯಗಳು ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಮತ್ತು ಸ್ನೇಹ ಸಂಬಂಧ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ.

ಇದು ಯುವ ವ್ಯವಹಾರ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತಜ್ಞತೆಯ ಮತ್ತು ಜ್ಞಾನದ ವಿಸ್ತಾರಕ್ಕೆ ಮತ್ತು ಯುವಜನರಲ್ಲಿ ಅಂತಾರಾಷ್ಟ್ರೀಯ ದೃಷ್ಟಿಕೋನ ಮೂಡಿಸಲೂ ನೆರವಾಗುತ್ತದೆ.

*****

AKT/VBA/AK