Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ದೆಹಲಿಯ ಭೀಕರ ಅಗ್ನಿ ಅವಘಡದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಉಂಟಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ  ಕುಟುಂಬಕ್ಕೆ ತಲಾ ರೂ. 2 ಲಕ್ಷಗಳನ್ನು ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ರೂ. 50,000ಗಳ ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ನೀಡುವುದಾಗಿ ಪ್ರಧಾನಮಂತ್ರಿಯವರು  ಘೋಷಿಸಿದ್ದಾರೆ.  

 ಪ್ರಧಾನಮಂತ್ರಿಯವರು ಈ ರೀತಿ ಸಂದೇಶ ಟ್ವೀಟ್ ಮಾಡಿದ್ದಾರೆ;

 “ದೆಹಲಿಯ ಬೆಂಕಿ ದುರಂತದಲ್ಲಿ ಆಗಿರುವ ಪ್ರಾಣಹಾನಿಯಿಂದ ತುಂಬಾ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ.”

 ಪ್ರಧಾನ ಮಂತ್ರಿ ಕಾರ್ಯಾಲಯವು ಈ ರೀತಿ ಸಂದೇಶ ಟ್ವೀಟ್ ಮಾಡಿದೆ;

 “ದೆಹಲಿಯ  ಅಗ್ನಿ ಅವಘಡದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ತಲಾ ರೂ. 2 ಲಕ್ಷಗಳನ್ನು ಹಾಗೂ ಗಾಯಾಳುಗಳಿಗೆ ರೂ. 50,000 ನೀಡಲಾಗುವುದು : ಪ್ರಧಾನ ಮಂತ್ರಿ  @narendramodi”

 

 

 

****