Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ರಾಜಮಾತೆ ವಿಜಯ ರಾಜೇ ಸಿಂಧಿಯಾ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸಿದ ಪ್ರಧಾನ ಮಂತ್ರಿಗಳು


ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಮಾತೆ ವಿಜಯ ರಾಜೇ ಸಿಂಧಿಯಾ ಅವರ ಜಯಂತಿ ಹಿನ್ನೆಲೆಯಲ್ಲಿ ಗೌರವ ಸಲ್ಲಿಸಿದರು. ರಾಜಮಾತೆ ವಿಜಯ ರಾಜೇ ಸಿಂಧಿಯಾ ಅವರು ತಮ್ಮ ಜೀವನವನ್ನು ಸಾರ್ವಜನಿಕರ ಕಲ್ಯಾಣ ಹಾಗೂ ರಾಷ್ಟ್ರ ಸೇವೆಗೆ ಸಮರ್ಪಿಸಿಕೊಂಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಬಡವರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ಅವರ ಕೈಗೊಂಡಿರುವ ಪ್ರಯತ್ನಗಳು ಬಲಿಷ್ಠ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಸ್ಪೂರ್ತಿ ನೀಡುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು.

ಪ್ರಧಾನ ಮಂತ್ರಿಗಳು “ಏಕ್ಸ್‌” ಸಾಮಾಜಿಕ ಜಾಲತಾಣದಲ್ಲಿ ಈ ಸಂಬಂಧ ಸಂದೇಶ ಪೋಸ್ಟ್ ಮಾಡಿದ್ದಾರೆ.

“ರಾಜಮಾತಾ ವಿಜಯರಾಜೇ ಸಿಂಧಿಯಾ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವಪೂರ್ವಕ ನಮನಗಳು. ಅವರು ತಮ್ಮ ಇಡೀ ಜೀವನವನ್ನು ಸಾರ್ವಜನಿಕರ ಕಲ್ಯಾಣ ಮತ್ತು ದೇಶ ಸೇವೆಗೆ ಮುಡಿಪಾಗಿಟ್ಟವರು. ಬಡವರು ಮತ್ತು ಹಿಂದುಳಿದವರ ಏಳಿಗೆಗೆ ಅವರು ಮಾಡಿರುವ ಪ್ರಯತ್ನಗಳು ಸದೃಢ ಭಾರತ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ,ʼʼ ಎಂದು ಹೇಳಿದರು.

***