ಪಿಎಂಇಂಡಿಯಾ
ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದುರ್ಘಟನೆಯಲ್ಲಿನ ಸಾವು-ನೋವಿಗೆ ಪ್ರಧಾನಮಂತ್ರಿ ಶ್ರೀ.ನರೇಂದ್ರ ಮೋದಿ ಶೋಕ ವ್ಯಕ್ತಪಡಿಸಿದ್ದು, ಮೃತರ ವಾರಸುದಾರರಿಗೆ ಮತ್ತು ಗಾಯಾಳುಗಳಿಗೆ ಪರಿಹಾರ ಪ್ರಕಟಿಸಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಶ್ರೀ.ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ)ದ ಪೋಸ್ಟ್ ಹೀಗಿದೆ:
“ ಪ್ರಧಾನಮಂತ್ರಿ ಶ್ರೀ @narendramodi ಅವರು ಹತ್ರಾಸ್ ದುರ್ಘಟನೆಯಲ್ಲಿ ಮೃತಪಟ್ಟವರ ವಾರಸುದಾರರಿಗೆ ಪಿಎಂಎನ್‌ಆರ್‌ಎಫ್ ನಿಂದ ತಲಾ ಎರಡು ಲಕ್ಷ ರೂಪಾಯಿ ಎಕ್ಸ್ ಗ್ರೇಷಿಯಾ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು”
ಶ್ರೀ ಮೋದಿ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರೊಂದಿಗೂ ಈ ಅನಿರೀಕ್ಷಿತ ದುರ್ಘಟನೆಯ ಬಗ್ಗೆ ಮಾತನಾಡಿದ್ದು, ಸಂತ್ರಸ್ತರಿಗೆ ಸಮಯಕ್ಕೆ ಸರಿಯಾಗಿ ನೆರವು ನೀಡುವ ಭರವಸೆ ನೀಡಿದ್ದಾರೆ.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ಉತ್ತರಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿದ್ದೇನೆ. ಉತ್ತರಪ್ರದೇಶ ಸರ್ಕಾರವು ಸಂತ್ರಸ್ತರಿಗೆ ಎಲ್ಲಾ ಸಾಧ್ಯ ನೆರವನ್ನು ನೀಡುತ್ತಿದೆ. ಈ ದುರ್ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. @myogiadityanath”
*****
The Prime Minister Shri @narendramodi Ji has announced an ex-gratia of Rs. 2 lakh from PMNRF for the next of kin of each deceased in the mishap in Hathras. The injured would be given Rs. 50,000.
— PMO India (@PMOIndia) July 2, 2024
उत्तर प्रदेश के हाथरस में हुए दुखद हादसे को लेकर मुख्यमंत्री योगी आदित्यनाथ जी से बात की। यूपी सरकार सभी पीड़ितों की हरसंभव सहायता में जुटी हुई है। मेरी संवेदनाएं उन लोगों के साथ हैं, जिन्होंने इसमें अपने प्रियजनों को खोया है। इसके साथ ही मैं सभी घायलों के जल्द से जल्द स्वस्थ…
— Narendra Modi (@narendramodi) July 2, 2024