Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಸಂಭವಿಸಿದ ಕಟ್ಟಡ ಕುಸಿತದಲ್ಲಿ  ಆಗಿರುವ  ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಈಶಾನ್ಯ ದಿಲ್ಲಿಯ ದಯಾಳ್ ಪುರ ಪ್ರದೇಶದಲ್ಲಿ ಕಟ್ಟಡ ಕುಸಿತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪಿಎಂಒ ಇಂಡಿಯಾ ಹ್ಯಾಂಡಲ್ ಎಕ್ಸ್ ನಲ್ಲಿ  ಮಾಡಿರುವ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:

“ಈಶಾನ್ಯ ದಿಲ್ಲಿಯ ದಯಾಲ್ಪುರ ಪ್ರದೇಶದಲ್ಲಿ ಕಟ್ಟಡ ಕುಸಿತದಿಂದಾಗಿ ಜೀವಹಾನಿಯಾಗಿರುವುದು ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ. ಗಾಯಗೊಂಡವರಿಗೆ 50,000 ರೂ ನೀಡಲಾಗುವುದು: ಪಿ.ಎಂ.ಎನ್.ಆರ್.ಎಫ್. ನಿಂದ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ @narendramodi”

 

 

*****