Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರೇಲಿಯಾ ಪ್ರಧಾನಮಂತ್ರಿ ಅವರು ಭಾರತ ಕ್ರಿಕೆಟ್ ತಂಡ ಮತ್ತು ಪ್ರಧಾನಮಂತ್ರಿ XI ಲೀಗ್ ತಂಡಗಳನ್ನು ಭೇಟಿ ಮಾಡಿದ ಬಗ್ಗೆ ಪ್ರಧಾನಮಂತ್ರಿ ಮೋದಿ ಸಂತಸ


ಭಾರತ ಮತ್ತು ಪ್ರಧಾನಮಂತ್ರಿ XI ಕ್ರಿಕೆಟ್ ತಂಡಗಳನ್ನು ಆಸ್ಟ್ರೇಲಿಯಾ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ ಇಂದು ಭೇಟಿಯಾದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದರು. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತೀಯ ಕ್ರಿಕೆಟಿಗರ ಅದ್ಭುತ ಆರಂಭಕ್ಕಾಗಿ ಕೂಡ ಪ್ರಧಾನಮಂತ್ರಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಮೋದಿ ಅವರು ಹೀಗೆ ಹೇಳಿದ್ದಾರೆ:

ನನ್ನ ಆತ್ಮೀಯ ಸ್ನೇಹಿತ ಪ್ರಧಾನಮಂತ್ರಿ ಶ್ರೀ ಆಂಥೋನಿ ಅಲ್ಬನೀಸ್ @AlboMP ಅವರನ್ನು ಭಾರತ ಮತ್ತು ಪ್ರಧಾನಮಂತ್ರಿ XI ತಂಡಗಳೊಂದಿಗೆ ನೋಡಲು ಸಂತೋಷವಾಗಿದೆ.

ಟೀಮ್ ಇಂಡಿಯಾ ಸರಣಿಯಲ್ಲಿ ಉತ್ತಮ ಆರಂಭವನ್ನು ಕಂಡಿದ್ದು, 140 ಕೋಟಿ ಭಾರತೀಯರು ಭಾರತ ಕ್ರಿಕೆಟ್ ತಂಡದ ಗೆಲುವಿಗೆ ಬೆಂಬಲ ನೀಡುತ್ತಿದ್ದಾರೆ.

ಮುಂದಿನ ರೋಮಾಂಚಕಾರಿ ಪಂದ್ಯಗಳನ್ನು ಎದುರು ನೋಡುತ್ತಿದ್ದೇನೆ.”

****