Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶುಭ ಶುಕ್ರವಾರದಂದು ಸಾಮರಸ್ಯ ಮತ್ತು ಸಹಾನುಭೂತಿಯ ಮೌಲ್ಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.

ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಗಾಢಗೊಳಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಆಶಿಸಿದ್ದಾರೆ.

ಭ್ರಾತೃತ್ವ ಮತ್ತು ಭರವಸೆ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು ಎಂದು ಅವರು ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಶುಭ ಶುಕ್ರವಾರವು ಯೇಸುಕ್ರಿಸ್ತನ ತ್ಯಾಗವನ್ನು ನೆನಪಿಸುತ್ತದೆ. ಈ ದಿನವು ಸಾಮರಸ್ಯ, ದಯೆ ಮತ್ತು ಕ್ಷಮೆಯ ಮೌಲ್ಯಗಳನ್ನು ಮತ್ತಷ್ಟು ಗಾಢವಾಗಿಸಲಿ. ಸಹೋದರತ್ವ ಮತ್ತು ಭರವಸೆ ನಮ್ಮೆಲ್ಲರಿಗೂ ಮಾರ್ಗದರ್ಶನ ನೀಡಲಿ.’’

 

*****