Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರಿಗೆ​​​​​​​ ಶುಭ ಕೋರಿದ ಪ್ರಧಾನಮಂತ್ರಿ


 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ನಿತೀಶ್ ಕುಮಾರ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಕೋರಿದ್ದಾರೆ.

ನಿತೀಶ್ ಕುಮಾರ್ ಅವರು ದೇಶದ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು, ಉತ್ತಮ ಆಡಳಿತಕ್ಕಾಗಿ ಅವರ ಬದ್ಧತೆ ಮತ್ತು ಬಿಹಾರದ ಅಭಿವೃದ್ಧಿಗೆ ಮರೆಯಲಾಗದ ಕೊಡುಗೆಯಿಂದಾಗಿ ಅವರು ಅತ್ಯಂತ ಹೆಸರುವಾಸಿಯಾಗಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು. ಅವರು ಸಂಸತ್ತಿಗೆ ಮರಳುವುದನ್ನು ನೋಡುವುದು ಸಂತೋಷವಾಗಿದೆ ಎಂದ ಹೇಳಿರುವ ಶ್ರೀ ನರೇಂದ್ರ ಮೋದಿ ಹಿರಿಯ ಶಾಸಕರಾಗಿ ಮತ್ತು ಮಾಜಿ ಕೇಂದ್ರ ಸಚಿವರಾಗಿ ಅವರ ವ್ಯಾಪಕ ಅನುಭವವು ಸದನದ ಘನತೆಯನ್ನು ಗಣನೀಯವಾಗಿ ಹೆಚ್ಚಳ ಮಾಡುತ್ತದೆ ಎಂದು ಖಚಿತಪಡಿಸಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:

“नीतीश कुमार जी देश के सबसे अनुभवी नेताओं में से एक हैं। सुशासन को लेकर उनकी प्रतिबद्धता की हर तरफ सराहना हुई है। उन्होंने बिहार के विकास में अमिट योगदान दिया है। उन्हें एक बार फिर संसद में देखना बहुत सुखद होगा। सांसद और केंद्रीय मंत्री के रूप में भी उन्होंने कई वर्षों तक अपनी सेवाएं दी हैं। मुझे पूरा विश्वास है कि उनके लंबे राजनीतिक अनुभव से संसद की गरिमा और बढ़ेगी। राज्यसभा सांसद के रूप में शपथ लेने पर उन्हें हार्दिक बधाई और आगे के कार्यकाल के लिए ढेरों शुभकामनाएं।”

 

*****