ಪಿಎಂಇಂಡಿಯಾ
ಪ್ರಧಾನಮಂತ್ರಿ ಗುಜರಾತ್ನ ವಲ್ಸಾದ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಗುಜರಾತ್ನ ವಲ್ಸಾದ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ: PM @narendramodi”
*****
The loss of lives due to a mishap in Valsad, Gujarat, is saddening. My thoughts are with the bereaved families in this hour of grief. Praying for the swift recovery of the injured: PM @narendramodi
— PMO India (@PMOIndia) April 22, 2026