ಪಿಎಂಇಂಡಿಯಾ
ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದಾರೆ. ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತಮ್ಮ ಹೃತ್ಪೂರ್ವಕ ಸಂತಾಪವನ್ನು ವ್ಯಕ್ತಪಡಿಸಿದ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;
“ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ದುಃಖ ತಂದಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.
ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi”
*****
The loss of lives due to an accident in Tehri Garhwal district of Uttarakhand is saddening. I extend my condolences to those who have lost their loved ones in this mishap. May the injured recover at the earliest.
— PMO India (@PMOIndia) April 23, 2026
An ex gratia of Rs. 2 lakh from PMNRF would be given to the next…