Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಎಸ್ಎಂಎಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ನಡುವಿನ ಸೆಮಿಕಂಡಕ್ಟರ್ ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭಕ್ಕೆ ಪ್ರಧಾನಮಂತ್ರಿ ಅವರು ಸಾಕ್ಷಿಯಾದರು 

ಎಎಸ್ಎಂಎಲ್ ಮತ್ತು ಟಾಟಾ ಎಲೆಕ್ಟ್ರಾನಿಕ್ಸ್ ನಡುವಿನ ಸೆಮಿಕಂಡಕ್ಟರ್ ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭಕ್ಕೆ ಪ್ರಧಾನಮಂತ್ರಿ ಅವರು ಸಾಕ್ಷಿಯಾದರು 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನೆದರ್ಲ್ಯಾಂಡ್ಸ್ ದೇಶದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ರೋಬ್ ಜೆಟ್ಟೆನ್ ಅವರೊಂದಿಗೆ ಇಂದು ಗುಜರಾತ್ನ ಧೋಲೇರಾದಲ್ಲಿ ಸೆಮಿಕಂಡಕ್ಟರ್ ಫ್ಯಾಬ್   ಸ್ಥಾಪನೆಗೆ ಬೆಂಬಲ ನೀಡಲು ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಎಎಸ್ಎಂಎಲ್ ನಡುವೆ ನಡೆದ ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆಗೆ ಸಾಕ್ಷಿಯಾದರು.

ಗುಜರಾತ್ ನಲ್ಲಿ ಭಾರತದ ಮೊದಲ ಫ್ರಂಟ್ ಎಂಡ್  ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗಾಗಿ ಟಾಟಾ ಎಲೆಕ್ಟ್ರಾನಿಕ್ಸ್ ಮತ್ತು ಎಎಸ್ಎಂಎಲ್ ಜೊತೆಯಾಗಿ ಪಾಲುದಾರಿಕೆ ಮಾಡಿಕೊಳ್ಳುವ ನಿರ್ಧಾರವನ್ನು ಉಭಯ ಪ್ರಧಾನಮಂತ್ರಿಗಳು ಸ್ವಾಗತಿಸಿದರು. ದೇಶದಲ್ಲಿ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಭಾರತದ ಪ್ರಯಾಣದಲ್ಲಿ ಈ ಪಾಲುದಾರಿಕೆಯು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಉಲ್ಲೇಖಿಸಿದರು.

ಎಎಸ್ಎಂಎಲ್ ಒಂದು ಡಚ್ ಬಹುರಾಷ್ಟ್ರೀಯ ಸಂಸ್ಥೆಯಾಗಿದ್ದು, ಸೆಮಿಕಂಡಕ್ಟರ್ ಚಿಪ್ ಗಳ ತಯಾರಿಕೆಯಲ್ಲಿ ನಿರ್ಣಾಯಕವಾಗಿ  ಅಗತ್ಯವಾಗಿರುವ ಹೈ-ಪ್ರೆಸಿಷನ್ ಲಿಥೋಗ್ರಫಿ ಉಪಕರಣಗಳ  ಪ್ರಮುಖ ಪೂರೈಕೆದಾರರಲ್ಲಿ ಒಂದಾಗಿದೆ. ಟಾಟಾ ಗ್ರೂಪ್ ನ ಅಂಗಸಂಸ್ಥೆಯಾದ ಟಾಟಾ ಎಲೆಕ್ಟ್ರಾನಿಕ್ಸ್, ಭಾರತೀಯ ವಿದ್ಯುನ್ಮಾನ ಮತ್ತು ಸೆಮಿಕಂಡಕ್ಟರ್ ತಯಾರಿಕಾ ಕಂಪನಿಯಾಗಿದ್ದು, ಗುಜರಾತಿನಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕವನ್ನು ಸ್ಥಾಪಿಸುತ್ತಿದೆ.

ಪ್ರಮುಖ ಡಚ್ ಸಿಇಒಗಳೊಂದಿಗಿನ ದುಂಡುಮೇಜಿನ ಸಭೆಯಲ್ಲಿ ಪ್ರಧಾನ ಮಂತ್ರಿಯವರ ಮಾತುಗಳನ್ನು [ಇಲ್ಲಿ] ನೋಡಬಹುದು  

 

*****