ಪಿಎಂಇಂಡಿಯಾ
ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಶ್ರೀ ತೋಶಿಮಿಟ್ಸು ಮೊಟೆಗಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯು ವಹಿಸಬಹುದಾದ ಪ್ರಮುಖ ಪಾತ್ರವನ್ನು ಶ್ರೀ ಮೋದಿ ಪುನರುಚ್ಚರಿಸಿದರು.
ಭಾರತ ಮತ್ತು ಜಪಾನ್ ನಡುವಿನ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಬಗ್ಗೆ ಉಭಯ ನಾಯಕರು ಚರ್ಚಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ʻಎಕ್ಸ್ʼ ಖಾತೆಯಲ್ಲಿ ಈ ಬಗ್ಗೆ ಈ ರೀತಿ ರೀತಿ ಹೇಳಿದ್ದಾರೆ:
“ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಶ್ರೀ ತೋಶಿಮಿಟ್ಸು ಮೊಟೆಗಿ ಅವರನ್ನು ಬರಮಾಡಿಕೊಳ್ಳಲು ಸಂತೋಷವಾಗಿದೆ. ಇಂಡೋ-ಪೆಸಿಫಿಕ್ ಮತ್ತು ಅದರಾಚೆಗೆ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಮುನ್ನಡೆಸುವಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವದ ಪ್ರಮುಖ ಪಾತ್ರವನ್ನು ಪುನರುಚ್ಚರಿಸಲಾಯಿತು.
@moteging”
*****
Delighted to receive Mr. Toshimitsu Motegi, Minister for Foreign Affairs of Japan. Reaffirmed the vital role of the India-Japan Special Strategic and Global Partnership in advancing peace, stability and prosperity across the Indo-Pacific and beyond.@moteging pic.twitter.com/39AB2xN6FD
— Narendra Modi (@narendramodi) May 26, 2026