Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಸಂಭವಿಸಿದ ದುರ್ಘಟನೆಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಸಂಭವಿಸಿದ ದುರ್ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ ಅವರು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ ಎಂದು ಅವರು ಹೇಳಿದರು.

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಹಾಗೂ ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ:

“ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಸಂಭವಿಸಿದ ದುರ್ಘಟನೆಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****