Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜರು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಾಧಾರಣ ಸಾರ್ವಜನಿಕ ವ್ಯಕ್ತಿ ಎಂದು ಸ್ಮರಿಸಿದರು. ಶಿಕ್ಷಣ, ಅಂತರ್ಗತ ಅಭಿವೃದ್ಧಿ ಮತ್ತು ದೀನದಲಿತರ ಕಲ್ಯಾಣಕ್ಕೆ ಶ್ರೀ ಕೆ. ಕಾಮರಾಜ್ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

ಶ್ರೀ ಕೆ. ಕಾಮರಾಜ್ ಅವರ ಜನ್ಮದಿನದಂದು ಅವರನ್ನು ಸ್ಮರಿಸುತ್ತೇನೆ. ಭಾರತದ ಸ್ವಾತಂತ್ರ್ಯ ಚಳವಳಿಯ ದಿಗ್ಗಜರು ಮತ್ತು ಅಸಾಧಾರಣ ಸಾರ್ವಜನಿಕ ವ್ಯಕ್ತಿಯಾಗಿದ್ದ ಅವರು ತಮ್ಮ ಜೀವನವನ್ನು ರಾಷ್ಟ್ರ ನಿರ್ಮಾಣಕ್ಕೆ ಮುಡಿಪಾಗಿಟ್ಟರು. ಶಿಕ್ಷಣ, ಅಂತರ್ಗತ ಅಭಿವೃದ್ಧಿ ಮತ್ತು ದೀನದಲಿತರ ಕಲ್ಯಾಣದಂತಹ ಕ್ಷೇತ್ರಗಳಿಗೆ ಅವರ ಅಚಲ ಬದ್ಧತೆಯು ತಲೆಮಾರುಗಳಿಗೆ ಮಾರ್ಗದರ್ಶನ ನೀಡುತ್ತಲೇ ಇದೆ.

 

*****