Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಕ್ಕಿಂನ ನಾಮ್ಚಿಯಲ್ಲಿ ಸುರಂಗ ಕುಸಿತದಿಂದಾದ ಜೀವಹಾನಿಗೆ ಪ್ರಧಾನಮಂತ್ರಿ ಶೋಕ


ಸಿಕ್ಕಿಂನ ನಾಮ್ಚಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದುಃಖ ವ್ಯಕ್ತಪಡಿಸಿದ್ದಾರೆ. ಅವರು ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂಪಾಯಿ ನೀಡುವುದಾಗಿ ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

“ಸಿಕ್ಕಿಂನ ನಾಮ್ಚಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತದಿಂದ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ ಎಂ ಎನ್ ಆರ್ ಎಫ್ ನಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi.”

 

*****