Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಯುವಕರ ಭವಿಷ್ಯವನ್ನು ರಕ್ಷಿಸಲು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ತ್ವರಿತಗತಿ ನ್ಯಾಯಾಲಯಗಳ ಸ್ಥಾಪನೆ ಘೋಷಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ ಎಂದು ಒತ್ತಿ ಹೇಳಿದ್ದಾರೆ.

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ಗುರಿಯನ್ನು ಹೊಂದಿರುವ ಸರಣಿ ಕ್ರಮಗಳನ್ನು ಮುಂದುವರಿದ ಭಾಗವೆಂದು ಶ್ರೀ ಮೋದಿ ಹೇಳಿದ್ದಾರೆ.

ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡುವುದಿಲ್ಲ ಎಂದು ಪ್ರಧಾನಮಂತ್ರಿ ದೃಢವಾಗಿ ಪ್ರತಿಪಾದಿಸಿದ್ದಾರೆ.

ʻಎಕ್ಸ್ʼ ಖಾತೆಯಲ್ಲಿ ಬಗ್ಗೆ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:

“ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಮುಖ್ಯವಾದುದು ಯಾವುದೂ ಇಲ್ಲ!

ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಇದು ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ನಮ್ಮ ಸರಣಿ ಕ್ರಮಗಳ ಮುಂದುವರಿಕೆಯಾಗಿದೆ.

ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಬಿಡಲಾಗುವುದಿಲ್ಲ.

देश के युवाओं का हित और उनका भविष्य हमारी सर्वोच्च प्राथमिकता है।

पेपर लीक के सभी मामलों में दोषियों को जल्द से जल्द कठोर दंड देने के लिए, केस के त्वरित निस्तारण के लिए फास्ट ट्रैक कोर्ट्स का गठन किया जाएगा। इस संबंध में निर्देश दे दिए गए हैं कि संबंधित विभाग आवश्यक कार्रवाई सुनिश्चित करें।

विद्यार्थियों के हितों को सुरक्षित करने के लिए, सरकार द्वारा लिए जा रहे निर्णयों की श्रृंखला में ये एक महत्वपूर्ण कदम है।

युवाओं के भविष्य के साथ खिलवाड़ करने वाले किसी भी व्यक्ति को बख्शा नहीं जाएगा।”

 

*****