Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಸೊರೊಖೈಬಮ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2026ರ ಕಾಮನ್ ವೆಲ್ತ್ ಕ್ರೀಡಾಕೂಟದ ಮಹಿಳೆಯರ 58 ಕೆ.ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಸೊರೊಖೈಬಮ್ ಅವರನ್ನು ಅಭಿನಂದಿಸಿದ್ದಾರೆ.

ಅವರ ಯಶಸ್ಸು ಅವರ ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯದ ಫಲವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಅವರ ಮುಂದಿನ ಪ್ರಯತ್ನಗಳಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ವೇಟ್ ಲಿಫ್ಟಿಂಗ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ! ಗ್ಲಾಸ್ಗೊ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 58 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಿಂದ್ಯಾರಾಣಿ ದೇವಿ ಸೊರೊಖೈಬಮ್ ಅವರ ಬಗ್ಗೆ ಹೆಮ್ಮೆಯಿದೆ. ಅವರ ಯಶಸ್ಸು ಅವರ ಕಠಿಣ ಪರಿಶ್ರಮ ಮತ್ತು ದೃಢನಿಶ್ಚಯದಿಂದಾಗಿ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ.

#CWG2026″ 

 

*****