ಪಿಎಂಇಂಡಿಯಾ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಜನರು ಮೃತಪಟ್ಟಿರುವ ಘಟನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ದುರಂತದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಈ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ತೀವ್ರ ಸಂತಾಪಗಳನ್ನು ಸೂಚಿಸುತ್ತಿದ್ದೇನೆ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಕುಟುಂಬ ಸದಸ್ಯರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯವು ಎಕ್ಸ್ನಲ್ಲಿ ಹಂಚಿಕೊಂಡಿರುವ ಪೋಸ್ಟ್ನಲ್ಲಿ ಹೀಗೆ ತಿಳಿಸಲಾಗಿದೆ:
“ಮಹಾರಾಷ್ಟ್ರದ ಥಾಣೆಯಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಈ ದುಃಖದ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ನನ್ನ ತೀವ್ರ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತಪಟ್ಟ ಪ್ರತಿಯೊಬ್ಬರ ಹತ್ತಿರದ ಕುಟುಂಬ ಸದಸ್ಯರಿಗೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ನೀಡಲಾಗುವುದು.”
*****
Pained to hear about the loss of lives due to the collapse of a building in Thane, Maharashtra. My thoughts are with the bereaved families in this hour of grief. May the injured recover at the earliest.
— PMO India (@PMOIndia) July 31, 2026
An ex-gratia of Rs. 2 lakh from PMNRF would be given to the next of kin of…
महाराष्ट्रात ठाणे येथे इमारत कोसळून झालेल्या जीवितहानीच्या वृत्ताने अत्यंत दुःख झाले. या दुःखद प्रसंगात माझ्या सहवेदना शोकाकुल कुटुंबांसोबत आहेत. या दुर्घटनेतील जखमी लवकरात लवकर बरे होवोत हीच प्रार्थना.
— PMO India (@PMOIndia) July 31, 2026
या दुर्घटनेत मृत्यू झालेल्या व्यक्तींच्या कुटुंबियांना प्रधानमंत्री सहायता…