Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯುನೈಟೆಡ್ ಕಿಂಗ್‌ಡಮ್‌ನ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಆಂಡಿ ಬರ್ನ್‌ಹ್ಯಾಮ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.

ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಬರ್ನ್‌ಹ್ಯಾಮ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕವಾಗಿ ಅಭಿನಂದಿಸಿದರು ಮತ್ತು ಅವರ ಯಶಸ್ವಿ ಅಧಿಕಾರಾವಧಿಗೆ ಶುಭಾಶಯಗಳನ್ನು ತಿಳಿಸಿದರು.

ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದರು. “ಭಾರತ-ಯುಕೆ ವಿಷನ್ 2035” ಕ್ಕೆ ಅನುಗುಣವಾಗಿ ತಂತ್ರಜ್ಞಾನ, ನಾವೀನ್ಯತೆ, ರಕ್ಷಣೆ, ಭದ್ರತೆ, ಶುದ್ಧ ಇಂಧನ, ಶಿಕ್ಷಣ ಮತ್ತು ಜನ-ಜನರ ನಡುವಿನ ಸಂಪರ್ಕ ಸೇರಿದಂತೆ ಆದ್ಯತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ಗಾಢವಾಗಿಸಲು ಅವರು ಒಪ್ಪಿಕೊಂಡರು.

ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು ಇತ್ತೀಚೆಗೆ ಜಾರಿಗೆ ಬಂದಿರುವುದನ್ನು ಉಭಯ ನಾಯಕರು ಸ್ವಾಗತಿಸಿದರು. ಅಲ್ಲದೆ, ಎರಡೂ ದೇಶಗಳ ಜನರ ಸಮಾನ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ಅದರ ವ್ಯಾಪಾರ ಮತ್ತು ಹೂಡಿಕೆ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವ ತಮ್ಮ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.

ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.

ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

******