Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಹಿಳೆಯರ 57 ಕೆಜಿ ಬಾಕ್ಸಿಂಗ್‌ ನಲ್ಲಿ ಚಿನ್ನ ಗೆದ್ದಿರುವ ಜಾಸ್ಮಿನ್ ಲಂಬೋರಿಯಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಗ್ಲಾಸ್ಗೋದಲ್ಲಿ ನಡೆದಿರುವ 2026ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ 57 ಕೆಜಿ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿರುವ ಜಾಸ್ಮಿನ್ ಲಂಬೋರಿಯಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಜಾಸ್ಮಿನ್ ಲಂಬೋರಿಯಾ ಅವರ ಬದ್ಧತೆ ಮತ್ತು ಸ್ಥಿರತೆ ಅವರ ಯಶಸ್ಸಿನಲ್ಲಿ ಸ್ಪಷ್ಟವಾಗಿ ಪ್ರತಿಫಲಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಜಾಸ್ಮಿನ್ ಅವರ ಮುಂದಿನ ಪ್ರಯತ್ನಗಳಿಗೆ ಶ್ರೀ ಮೋದಿ ಅವರು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:

“ಗ್ಲಾಸ್ಗೋ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 57 ಕೆಜಿ ಮಹಿಳಾ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದಿರುವ ಜಾಸ್ಮಿನ್ ಲಂಬೋರಿಯಾ ಅವರಿಗೆ ಅಭಿನಂದನೆಗಳು. ಅವರ ಬದ್ಧತೆ ಮತ್ತು ಸ್ಥಿರತೆಯು ಅವರ ಯಶಸ್ಸಿನಲ್ಲಿ ಸ್ಪಷ್ಟವಾಗಿ ಪ್ರತಿಫಲಿಸಿದೆ. ಅವರಿಗೆ ನನ್ನ ಶುಭ ಹಾರೈಕೆಗಳು.

#CWG2026”

 

*****