Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಬಿಹಾರದ ಲಖಿಸರೈನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ದುಃಖದ ಈ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ತಮ್ಮ ಆಲೋಚನೆಗಳು ಇರುತ್ತವೆ ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಕ್ರಿಯವಾಗಿ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.

ಎಕ್ಸ್‌ ತಾಣದಲ್ಲಿ ಎಂದು ಪ್ರಧಾನಮಂತ್ರಿಯವರು ಈ ರೀತಿ ಬರೆದಿದ್ದಾರೆ:

“ಬಿಹಾರದ ಲಖಿಸರೈನಲ್ಲಿ ಘಟಿಸಿದ ಕಾಲ್ತುಳಿತದಲ್ಲಿ ಸಂಭವಿಸಿದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಈ ದುಃಖದ ಘಳಿಗೆಯಲ್ಲಿ ಮೃತರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಪೀಡಿತರಿಗೆ ಸಹಾಯ ಮಾಡುತ್ತಿದೆ.”

 

*****