Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎಸ್ ಸಿ ಒ   ಶೃಂಗಸಭೆಯ ಸಂದರ್ಭದಲ್ಲಿ ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ

ಎಸ್ ಸಿ ಒ   ಶೃಂಗಸಭೆಯ ಸಂದರ್ಭದಲ್ಲಿ ಇರಾನ್ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಶ್ಕೆಕ್ನಲ್ಲಿ ನಡೆದ ಎಸ್ ಸಿ ಒ  ಶೃಂಗಸಭೆಯ ಸಂದರ್ಭದಲ್ಲಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ನ ಅಧ್ಯಕ್ಷರಾದ ಗೌರವಾನ್ವಿತ ಡಾ. ಮಸೌದ್ ಪೆಜೆಶ್ಕಿಯನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು. ಇಬ್ಬರೂ ಪಶ್ಚಿಮ ಏಷ್ಯಾ ಸಂಘರ್ಷದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು ಮತ್ತು ಬದಲಾಗುತ್ತಿರುವ ಪರಿಸ್ಥಿತಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬಗ್ಗೆ ಪ್ರಧಾನಮಂತ್ರಿಯವರು ಕಳವಳ ವ್ಯಕ್ತಪಡಿಸಿದರು ಮತ್ತು ಎಲ್ಲಾ ಸಮಸ್ಯೆಗಳನ್ನು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಬೇಕು ಎಂಬ ಭಾರತದ ನಿರಂತರ ನಿಲುವನ್ನು ಪುನರುಚ್ಚರಿಸಿದರು.

ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಶಾಶ್ವತ ಶಾಂತಿ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳಲು ನಿರಂತರ ಪ್ರಯತ್ನಗಳ ಅಗತ್ಯವನ್ನು ಪ್ರಧಾನಮಂತ್ರಿಯವರು ಪುನರುಚ್ಚರಿಸಿದರು. ನೌಕಾಯಾನ ಮತ್ತು ವಾಣಿಜ್ಯ ಸ್ವಾತಂತ್ರ್ಯವನ್ನು ರಕ್ಷಿಸಲು ಕರೆ ನೀಡಿದ ಅವರು, ವಾಣಿಜ್ಯ ಹಡಗುಗಳು ಮತ್ತು ನಾವಿಕರು ಸೇರಿದಂತೆ ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳಿಗೆ ಯಾವುದೇ ಕಾರಣಕ್ಕೂ ಹಾನಿಯಾಗಬಾರದು ಎಂದು ಒತ್ತಿ ಹೇಳಿದರು.

ಬ್ರಿಕ್ಸ್  ಮತ್ತು ಎಸ್ ಸಿ ಒ  ಸೇರಿದಂತೆ ಬಹುಪಕ್ಷೀಯ ಸಂಸ್ಥೆಗಳಲ್ಲಿ ಇರಾನ್ ದೇಶದೊಂದಿಗೆ ನಿಕಟವಾಗಿ ಸಹಕರಿಸಲು ಭಾರತದ ಸಿದ್ಧತೆಯನ್ನು ಪುನರುಚ್ಚರಿಸಿದ ಪ್ರಧಾನಮಂತ್ರಿಯವರು, ಬ್ರಿಕ್ಸ್ ಶೃಂಗಸಭೆಗಾಗಿ ಅಧ್ಯಕ್ಷ ಪೆಜೆಶ್ಕಿಯನ್ ಅವರನ್ನು ಭಾರತಕ್ಕೆ ಸ್ವಾಗತಿಸಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು.

 

*****