Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ನವದೆಹಲಿಯಲ್ಲಿ ಫಿಲಿಪ್ಪೀನ್ಸ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಫರ್ಡಿನಾಂಡ್ ಆರ್. ಮಾರ್ಕೋಸ್ ಜೂನಿಯರ್ ಅವರನ್ನು ಭೇಟಿಯಾದರು. ಪ್ರಸ್ತುತ ಆಸಿಯಾನ್ ಅಧ್ಯಕ್ಷರಾಗಿ ಬ್ರಿಕ್ಸ್ ಶೃಂಗಸಭೆಯಲ್ಲಿ ಫಿಲಿಪ್ಪೀನ್ಸ್ ಭಾಗವಹಿಸಿರುವುದನ್ನು ಪ್ರಧಾನಮಂತ್ರಿ ಸ್ವಾಗತಿಸಿದರು.

ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದಲ್ಲಿ ಆಗಿರುವ ಪ್ರಗತಿಯ ಬಗ್ಗೆ ನಾಯಕರು ತೃಪ್ತಿ ವ್ಯಕ್ತಪಡಿಸಿದರು ಮತ್ತು ರಕ್ಷಣೆ ಮತ್ತು ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಬಾಹ್ಯಾಕಾಶ, ರೈಲ್ವೆ ಮೂಲಸೌಕರ್ಯ, ಫಿನ್ ಟೆಕ್, ಶಿಕ್ಷಣ, ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ, ನಾವೀನ್ಯತೆ ಮತ್ತು ಜನರ ನಡುವಿನ ಸಂಬಂಧಗಳ ಕ್ಷೇತ್ರಗಳಲ್ಲಿ ಸಹಯೋಗವನ್ನು ಮತ್ತಷ್ಟು ಗಾಢವಾಗಿಸಲು ಮತ್ತು ವಿಸ್ತರಿಸಲು ಒಪ್ಪಿಕೊಂಡರು. ಅಧ್ಯಕ್ಷರಾದ ಮಾರ್ಕೋಸ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ ಆಗಸ್ಟ್ 2025ರಲ್ಲಿ ಉಭಯ ದೇಶಗಳ ನಡುವೆ ಸ್ಥಾಪಿಸಲಾದ ಕಾರ್ಯತಂತ್ರದ ಪಾಲುದಾರಿಕೆಯ ಆಶ್ರಯದಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಇಬ್ಬರೂ ನಾಯಕರು ಒಪ್ಪಿಕೊಂಡರು. ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಗಳ ಒಕ್ಕೂಟಕ್ಕೆ ಸೇರುವ ಫಿಲಿಪ್ಪೀನ್ಸ್ ನಿರ್ಧಾರವನ್ನು ಪ್ರಧಾನಮಂತ್ರಿಯವರು ಸ್ವಾಗತಿಸಿದರು.

ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರವನ್ನು ಬಲಪಡಿಸುವ ಬದ್ಧತೆಯನ್ನು ಪುನರುಚ್ಚರಿಸಿದರು.

 

*****