Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಕೋರಿದ ಪ್ರಧಾನಮಂತ್ರಿ


ಏಷ್ಯಾ ಕಪ್ ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಪಂದ್ಯಾವಳಿಯುದ್ದಕ್ಕೂ ತಂಡದ ಆತ್ಮವಿಶ್ವಾಸ, ಸ್ಥಿರತೆ ಮತ್ತು ಅದ್ಭುತ ಕ್ರೀಡಾ ಸ್ಫೂರ್ತಿ ಎದ್ದು ಕಾಣುತ್ತಿತ್ತು ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

ಈ ಗೆಲುವು ದೇಶಾದ್ಯಂತ ಲಕ್ಷಾಂತರ ಯುವಕ-ಯುವತಿಯರಿಗೆ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಮತ್ತು ಮಿಂಚಲು ಪ್ರೇರಣೆಯಾಗಲಿ ಎಂದು ಶ್ರೀ ಮೋದಿ ಆಶಿಸಿದರು.

X ನಲ್ಲಿ ಪೋಸ್ಟ್ ಮಾಡಿರುವ ಶ್ರೀ ಮೋದಿ;

“ಭಾರತೀಯ ಕ್ರಿಕೆಟ್‌ಗೆ ಹೆಮ್ಮೆಯ ಕ್ಷಣ!

ಏಷ್ಯಾ ಕಪ್ ಗೆದ್ದ ಮಹಿಳಾ ತಂಡಕ್ಕೆ ಅಭಿನಂದನೆಗಳು. ಟೂರ್ನಿಯುದ್ದಕ್ಕೂ ಅವರ ಆತ್ಮವಿಶ್ವಾಸ, ಸ್ಥಿರತೆ ಮತ್ತು ಅದ್ಭುತ ಕ್ರೀಡಾ ಸ್ಫೂರ್ತಿ ಎದ್ದು ಕಾಣುತ್ತಿತ್ತು.

ಈ ಗೆಲುವು ದೇಶಾದ್ಯಂತ ಲಕ್ಷಾಂತರ ಯುವಕ-ಯುವತಿಯರಿಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಲು ಮತ್ತು ಮಿಂಚಲು ಪ್ರೇರಣೆಯಾಗಲಿ.”

 

*****