ಪಿಎಂಇಂಡಿಯಾ
ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಗಳು ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್ ಆರ್ ಎಫ್) ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
ಮಧ್ಯಪ್ರದೇಶದ ಅಗರ್ ಮಾಲ್ವಾದಲ್ಲಿ ಸಂಭವಿಸಿದ ದುರ್ಘಟನೆಯು ಅತ್ಯಂತ ನೋವಿನ ಸಂಗತಿ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು.
ಮೃತರ ವಾರಸುದಾರರಿಗೆ ಪಿ ಎಂ ಎನ್ ಆರ್ ಎಫ್ ನಿಂದ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi
*****
The mishap in Agar Malwa, Madhya Pradesh, is extremely painful. I extend my condolences to those who have lost their loved ones.
— PMO India (@PMOIndia) September 19, 2026
An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi