Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳಲಿರುವ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶುಭ ಹಾರೈಕೆ


ಐಚಿ-ನಾಗೋಯಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್ ನಲ್ಲಿ ಪಾಲ್ಗೊಳ್ಳುತ್ತಿರುವ ಭಾರತೀಯ ತಂಡಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಭಾರತವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವೂ ಅತ್ಯಂತ ಕಠಿಣ ಪರಿಶ್ರಮ ವಹಿಸಿದ್ದು, ಇಡೀ ದೇಶ ಅವರ ಬಗ್ಗೆ ಹೆಮ್ಮೆಪಡುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 

ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: 

“ಐಚಿ-ನಾಗೋಯಾದಲ್ಲಿ ಏಷ್ಯನ್ ಕ್ರೀಡಾಕೂಟ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ, ಭಾರತೀಯ ತಂಡಕ್ಕೆ ನನ್ನ ಶುಭ ಹಾರೈಕೆಗಳು. ಪ್ರತಿಯೊಬ್ಬ ಕ್ರೀಡಾಪಟುವೂ ಅಪಾರ ಕಠಿಣ ಪರಿಶ್ರಮ ವಹಿಸಿದ್ದು,  ಅತ್ಯಂತ ಬದ್ಧತೆ ಮತ್ತು ದೃಢನಿಶ್ಚಯವನ್ನು ಪ್ರದರ್ಶಿಸಿದ್ದಾರೆ. ಭಾರತಕ್ಕೆ ಅವರ ಬಗ್ಗೆ ಹೆಮ್ಮೆಯಿದೆ.

ಅವರು ತಮ್ಮ ಅತ್ಯುತ್ತಮ ಪ್ರದರ್ಶನ ನೀಡಲಿ, ಚೆನ್ನಾಗಿ ಆಡಲಿ ಮತ್ತು ಪ್ರಜ್ವಲಿಸಲಿ!

 

*****