Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ


ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು, ಇದು ಭಾರತೀಯ ಕ್ರಿಕೆಟ್ಗೆ ಅದ್ಭುತ ವಿಜಯವಾಗಿದೆ ಎಂದು ಅವರು ಬಣ್ಣಿಸಿದರು.

ಕ್ರೀಡಾಕೂಟದಲ್ಲಿ ಇದು ಅಭೂತಪೂರ್ವ ಪ್ರದರ್ಶನವಾಗಿದ್ದು, ಆತ್ಮವಿಶ್ವಾಸ, ಕೌಶಲ್ಯ ಮತ್ತು ಅದ್ಭುತ ತಂಡದ ಕೆಲಸದಿಂದ ಗುರುತಿಸಲ್ಪಟ್ಟಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಈ ಗೆಲುವು ಭಾರತಕ್ಕೆ ಈ ಆವೃತ್ತಿಯ ಕ್ರೀಡಾಕೂಟದಲ್ಲಿ ಮೊದಲ ಚಿನ್ನವನ್ನು ತಂದುಕೊಟ್ಟಿದೆ ಎಂದು ಅವರು ಹೇಳಿದರು. ತಂಡವು ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ ಮತ್ತು ದೇಶಾದ್ಯಂತದ ಅಸಂಖ್ಯಾತ ಯುವ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ ಎಂದು ಅವರು ಹೇಳಿದರು, ಜೊತೆಗೆ ಇಡೀ ತಂಡಕ್ಕೆ ಶುಭಾಶಯಗಳನ್ನು ಕೋರಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್‌ ಪೋಸ್ಟ್ ನಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

“ಭಾರತೀಯ ಕ್ರಿಕೆಟ್ ಗೆ ಅದ್ಭುತ ಗೆಲುವು!

ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ನಮ್ಮ ಮಹಿಳಾ ಕ್ರಿಕೆಟ್ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಕ್ರೀಡಾಕೂಟದಲ್ಲಿ ಇದು ಅದ್ಭುತ ಪ್ರದರ್ಶನವಾಗಿತ್ತು, ಇದು ಆತ್ಮವಿಶ್ವಾಸ, ಕೌಶಲ್ಯ ಮತ್ತು ಅದ್ಭುತ ತಂಡದ ಕೆಲಸದಿಂದ ಗುರುತಿಸಲ್ಪಟ್ಟಿದೆ.

ಈ ಗೆಲುವು ಭಾರತಕ್ಕೆ ಈ ಕ್ರೀಡಾಕೂಟದ ಆವೃತ್ತಿಯಲ್ಲಿ ಮೊದಲ ಚಿನ್ನವನ್ನು ತಂದುಕೊಟ್ಟಿದೆ. ತಂಡವು ದೇಶವನ್ನು ಹೆಮ್ಮೆಪಡುವಂತೆ ಮಾಡಿದೆ ಮತ್ತು ದೇಶಾದ್ಯಂತ ಅಸಂಖ್ಯಾತ ಯುವ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡುತ್ತದೆ.

ಇಡೀ ತಂಡಕ್ಕೆ ಶುಭಾಶಯಗಳು: ಪ್ರಧಾನಮಂತ್ರಿ @narendramodi”

 

*****