ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಿಳೆಯರ 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಅವರ ದೃಢನಿಶ್ಚಯ ಮತ್ತು ಸ್ಥಿರತೆಯು ದೇಶಕ್ಕೆ ನಿರಂತರವಾಗಿ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿರುವ ಪ್ರಧಾನಮಂತ್ರಿ ಅವರು, ಭಾರತಕ್ಕೆ ಅವರ ಬಗ್ಗೆ ಅಪಾರ ಹೆಮ್ಮೆ ಇದೆ ಎಂದು ತಿಳಿಸಿದರು. ಅಲ್ಲದೆ, ಅವರ ಮುಂದಿನ ಪ್ರಯತ್ನಗಳಿಗೆ ಅವರು ಶುಭ ಹಾರೈಸಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ತಮ್ಮ X ಪೋಸ್ಟ್ನಲ್ಲಿ ಹೀಗೆ ಹಂಚಿಕೊಂಡಿದೆ:
“ಮೀರಾಬಾಯಿ ಚಾನು @mirabai_chanu ಅವರಿಗೆ ವಿಶೇಷ ಬೆಳ್ಳಿ ಪದಕ!
ಮಹಿಳೆಯರ 49 ಕೆಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರ ದೃಢನಿಶ್ಚಯ ಮತ್ತು ಸ್ಥಿರತೆಯು ದೇಶಕ್ಕೆ ನಿರಂತರವಾಗಿ ಸ್ಫೂರ್ತಿ ನೀಡುತ್ತಿದೆ. ಭಾರತಕ್ಕೆ ಅವರ ಬಗ್ಗೆ ಅಪಾರ ಹೆಮ್ಮೆ ಇದೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”
*****
A special Silver for @mirabai_chanu! Congratulations to her on winning the medal in the Women’s 49 kg Weightlifting event. Her determination and consistency continue to inspire the nation. India is proud of her. Best wishes for her future endeavours: PM @narendramodi pic.twitter.com/PTKLjXRjjw
— PMO India (@PMOIndia) September 23, 2026