ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಬಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಉಂಟಾದ ಪ್ರಾಣಹಾನಿಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ ಆರ್ ಎಫ್) ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಧನವನ್ನು ನೀಡುವುದಾಗಿ ಪ್ರಧಾನಮಂತ್ರಿ ಘೋಷಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದೂ ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.
ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ನಲ್ಲಿ ಹೀಗೆ ಬರೆದಿದೆ:
“ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಬಸ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಪ್ರಾಣಹಾನಿಯಾಗಿರುವುದು ಅತ್ಯಂತ ದುಃಖಕರ ವಿಷಯವಾಗಿದೆ. ತಮ್ಮ ಹತ್ತಿರದ ಬಂಧುಗಳನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ ಆರ್ ಎಫ್) ತಲಾ 2 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡಲಾಗುವುದು: ಪ್ರಧಾನಮಂತ್ರಿ @narendramodi”
*****
Distressed to hear about the loss of lives due to a fire tragedy on a bus in Greater Noida, Uttar Pradesh. Condolences to those who have lost their loved ones. Praying for the swift recovery of the injured.
— PMO India (@PMOIndia) September 24, 2026
An ex-gratia of Rs. 2 lakh from PMNRF would be given to the next of kin…