Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಸತ್ನಾಮ್ ಸಿಂಗ್ ಮತ್ತು ಸಲ್ಮಾನ್ ಖಾನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಭಾರತಕ್ಕೆ ಅರ್ಹವಾದ ಕಂಚಿನ ಪದಕವನ್ನು ತಂದುಕೊಟ್ಟ ಸತ್ನಾಮ್ ಸಿಂಗ್ ಮತ್ತು ಸಲ್ಮಾನ್ ಖಾನ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಅವರ ಸಂಯಮ ಮತ್ತು ಪರಸ್ಪರ ಹೊಂದಾಣಿಕೆ ಎದ್ದು ಕಾಣುವಂತಿತ್ತು ಎಂದು ಪ್ರಧಾನಮಂತ್ರಿಗಳು ತಿಳಿಸಿದರು. ಈ ಸಾಧನೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಎತ್ತರವನ್ನು ಏರಲು ಅವರಿಗೆ ಸ್ಫೂರ್ತಿಯಾಗಲಿದೆ ಎಂಬ ಆಶಯವನ್ನೂ ಅವರು ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯ ತನ್ನ X ನಲ್ಲಿ ಹೀಗೆ ಬರೆದಿದೆ:

“ಪುರುಷರ ಡಬಲ್ ಸ್ಕಲ್ಸ್ ವಿಭಾಗದಲ್ಲಿ ಸತ್ನಾಮ್ ಸಿಂಗ್ ಮತ್ತು ಸಲ್ಮಾನ್ ಖಾನ್ ಅವರ ಅತ್ಯುತ್ತಮ ಪ್ರದರ್ಶನವು ಭಾರತಕ್ಕೆ ಅರ್ಹವಾದ ಕಂಚಿನ ಪದಕವನ್ನು ತಂದುಕೊಟ್ಟಿದೆ.

ಅವರ ಸಂಯಮ ಮತ್ತು ಪರಸ್ಪರ ಹೊಂದಾಣಿಕೆ ಎದ್ದು ಕಾಣುವಂತಿತ್ತು. ಈ ಸಾಧನೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಎತ್ತರವನ್ನು ಏರಲು ಅವರಿಗೆ ಸ್ಫೂರ್ತಿಯಾಗಲಿ: ಪ್ರಧಾನಮಂತ್ರಿ @narendramodi”

 

*****