Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಸೀಮಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಷ್ಯನ್ ಗೇಮ್ಸ್ ನಲ್ಲಿ ಮಹಿಳೆಯರ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಸೀಮಾ ಅವರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ, ಅವರ ಈ ಸಾಧನೆಗಾಗಿ ಅಭಿನಂದಿಸಿದ್ದಾರೆ.

ಅವರ ದೃಢ ಪ್ರದರ್ಶನದಿಂದ ಭಾರತಕ್ಕೆ ಈ ಕ್ರೀಡಾಕೂಟದಲ್ಲಿ ಹಲವು ವರ್ಷಗಳ ನಂತರ ಪದಕ ಲಭಿಸಿದೆ ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. ಸಹಿಷ್ಣುತೆ, ಶಿಸ್ತು ಮತ್ತು ವರ್ಷಗಳ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸಿರುವ ಅದ್ಭುತ ಸಾಧನೆ ಇದು ಎಂದು ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಅವರು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯ ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:

“ಏಷ್ಯನ್ ಕ್ರೀಡಾಕೂಟದ ಮಹಿಳೆಯರ 10,000 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಸೀಮಾ ಅವರ ಬಗ್ಗೆ ಹೆಮ್ಮೆ ಇದೆ! ಅವರಿಗೆ ಅಭಿನಂದನೆಗಳು.

ಅವರ ಬದ್ಧ ಪ್ರದರ್ಶನವು ಹಲವು ವರ್ಷಗಳ ನಂತರ ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಪದಕ ತಂದುಕೊಟ್ಟಿದೆ. ತಾಳ್ಮೆ, ಶಿಸ್ತು ಮತ್ತು ಅನೇಕ ವರ್ಷಗಳ ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುವ ಅಮೋಘ ಸಾಧನೆ ಇದಾಗಿದೆ.

ಭವಿಷ್ಯದಲ್ಲಿ ಅವರಿಗೆ ಇನ್ನೂ ಹೆಚ್ಚಿನ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****