ಪಿಎಂಇಂಡಿಯಾ
ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಉಳಿಸಿಕೊಂಡ ಭಾರತೀಯ ಪುರುಷರ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಇದು ನಿಜಕ್ಕೂ ರಾಷ್ಟ್ರಕ್ಕೆ ಸಂತೋಷದ ಸಂದರ್ಭ ಎಂದು ಪ್ರಧಾನಮಂತ್ರಿ ಹೇಳಿದರು.
ತಂಡದ ಸದಸ್ಯರ ಭವಿಷ್ಯದ ಪ್ರಯತ್ನಗಳಿಗೆ ಶ್ರೀ ನರೇಂದ್ರ ಮೋದಿ ಅವರು ಶುಭ ಹಾರೈಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರ ಕಾರ್ಯಾಲಯ,
“ಭಾರತಕ್ಕೆ ಮತ್ತೊಮ್ಮೆ ಚಿನ್ನ ಬಂದಿದೆ!
ಏಷ್ಯನ್ ಗೇಮ್ಸ್ ನಲ್ಲಿ ಪ್ರಶಸ್ತಿಯನ್ನು ಉಳಿಸಿಕೊಂಡ ನಮ್ಮ ಪುರುಷರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಇದು ನಿಜಕ್ಕೂ ರಾಷ್ಟ್ರಕ್ಕೆ ಸಂತೋಷದ ಸಂದರ್ಭವಾಗಿದೆ. ತಂಡದ ಸದಸ್ಯರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು: ಪ್ರಧಾನಮಂತ್ರಿ @narendramodi” ಎಂದಿದ್ದಾರೆ.
*****
The Gold comes to India yet again!
— PMO India (@PMOIndia) October 3, 2026
Congratulations to our Men’s Cricket Team on retaining their title at the Asian Games. This is indeed a joyous occasion for the nation. My best wishes to the team members for their future endeavours: PM @narendramodi