Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಾರ್ವಜನಿಕ ಜೀವನದಲ್ಲಿ ಸೇವೆ, ಅಭಿವೃದ್ಧಿ ಮತ್ತು ರಾಷ್ಟ್ರನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ಮೋದಿ ನೀಡಿದ 25 ವರ್ಷಗಳ ಕೊಡುಗೆಯನ್ನು ಎತ್ತಿಹಿಡಿಯುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಅವರ ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಬರೆದ ಲೇಖನವನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಸಾರ್ವಜನಿಕ ಜೀವನವು ಸೇವೆ, ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದ ಪಯಣವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ರೀ ಏಕನಾಥ್ ಶಿಂಧೆ ಲೇಖನದಲ್ಲಿ ಬರೆದಿದ್ದಾರೆ. ಗುಜರಾತ್‌ನಿಂದ ದೆಹಲಿಯವರೆಗೆ, ಮೂಲಸೌಕರ್ಯ, ತಂತ್ರಜ್ಞಾನ, ಕಲ್ಯಾಣ ಮತ್ತು ಸಾಂಸ್ಕೃತಿಕ ಪರಂಪರೆಯ ಮೇಲಿನ ಗಮನವು ಭಾರತದ ಅಭಿವೃದ್ಧಿ ಪಯಣವನ್ನು ರೂಪಿಸಿದೆ ಎಂಬುದನ್ನು ಅದು ಪ್ರಮುಖವಾಗಿ ಪ್ರಸ್ತಾಪಿಸುತ್ತದೆ. ಮುಂದಿನ ಹಂತವು ಸದೃಢವಾದ ಮತ್ತು ಸ್ವಾವಲಂಬಿ ಭಾರತದ ದೂರದೃಷ್ಟಿಯೊಂದಿಗೆ 2047ರ ವಿಕಸಿತ ಭಾರತಡೆಗೆ ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಕಾರ್ಯಾಲಯವು X ಪೋಸ್ಟ್‌ನಲ್ಲಿ ಹೀಗೆ ಹೇಳಿದೆ.

“ಪ್ರಧಾನಮಂತ್ರಿ @narendramodi ಅವರ 25 ವರ್ಷಗಳ ಸಾರ್ವಜನಿಕ ಜೀವನವು ಸೇವೆ, ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದ ಪಯಣವನ್ನು ಪ್ರತಿಬಿಂಬಿಸುತ್ತದೆ” ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ @mieknathshinde ಬರೆದಿದ್ದಾರೆ.

ಗುಜರಾತ್‌ನಿಂದ ದೆಹಲಿಯವರೆಗೆ, ಮೂಲಸೌಕರ್ಯ, ತಂತ್ರಜ್ಞಾನ, ಕಲ್ಯಾಣ ಮತ್ತು ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಗಮನ ಹರಿಸುತ್ತಿರುವುದು ಭಾರತದ ಅಭಿವೃದ್ಧಿ ಪಯಣವನ್ನು ರೂಪಿಸಿದೆ.

ಮುಂದಿನ ಹಂತವು ಸದೃಢವಾದ ಮತ್ತು ಸ್ವಾವಲಂಬಿ ಭಾರತದ ದೂರದೃಷ್ಟಿಯೊಂದಿಗೆ 2047ರ ವಿಕಸಿತ ಭಾರತಡೆಗೆ ನೋಡುತ್ತದೆ.”

 

*****