Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬ್ಲೂಮ್‌ಬರ್ಗ್ ನ್ಯೂ ಎಕಾನಮಿ ಫೋರಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ  ಮೋದಿ ಭೇಟಿ ಮಾಡಿದ ಯುಕೆ ಮಾಜಿ ಪ್ರಧಾನಮಂತ್ರಿ ರಿಷಿ ಸುನಕ್


ಬ್ರಿಟನ್‌ನ ಮಾಜಿ ಪ್ರಧಾನಮಂತ್ರಿ ರಿಷಿ ಸುನಕ್ ಅವರು ನವದೆಹಲಿಯಲ್ಲಿ ನಡೆದ ಬ್ಲೂಮ್‌ಬರ್ಗ್ ನ್ಯೂ ಎಕಾನಮಿ ಫೋರಂನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಸಾರ್ವಜನಿಕ ಸೇವೆಯಲ್ಲಿ 25 ವರ್ಷಗಳನ್ನು ಪೂರೈಸಿರುವುದಕ್ಕೆ ಅವರನ್ನು ಅಭಿನಂದಿಸಿದರು.

ರಿಷಿ ಸುನಕ್ ಅವರು ತಮ್ಮ ‘ಎಕ್ಸ್‌’ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ ಪ್ರಧಾನಮಂತ್ರಿಯವರ ಬದ್ಧತೆ, ಕಾರ್ಯತತ್ಪರತೆ ಮತ್ತು ಉತ್ಸಾಹವನ್ನು ಶ್ಲಾಘಿಸಿದರು. ವಿಶೇಷವಾಗಿ ವ್ಯಾಪಾರ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಕ್ಷೇತ್ರಗಳಲ್ಲಿ ಭಾರತ–ಬ್ರಿಟನ್ ಸಂಬಂಧ ಮತ್ತಷ್ಟು ಬಲವರ್ಧನೆಗೊಳ್ಳುತ್ತಿರುವುದನ್ನು ಅವರು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ರಿಷಿ ಸುನಕ್ ಅವರ ಪೋಸ್ಟ್‌ಗೆ ‘ಎಕ್ಸ್‌’ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, “ಇಂದು ಬ್ಲೂಮ್‌ಬರ್ಗ್ ನ್ಯೂ ಎಕಾನಮಿ ಫೋರಂನಲ್ಲಿ ನಿಮ್ಮನ್ನು ಭೇಟಿಯಾಗಿದ್ದು ಬಹಳ ಸಂತಸ ತಂದಿದೆ!” 

 

*****