ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಘಟನೆ ದುಃಖಕರವಾಗಿದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿದರು ಮತ್ತು ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ಪಶ್ಚಿಮ ಬಂಗಾಳ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ ಎಂದು ಅವರು ಹೇಳಿದರು.
ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಅನುಕಂಪದ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಯವರು ಘೋಷಿಸಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೆ ಮಾಡಿದೆ;
“ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣವು ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ: ಪ್ರಧಾನಮಂತ್ರಿ @narendramodi “
“ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) 2 ಲಕ್ಷ ರೂ. ಅನುಕಂಪದ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು.”
ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಕ್ಸ್ ತಾಣದಲ್ಲಿ ಈ ರೀತಿ ಬರೆದಿದ್ದಾರೆ;
“ಕೋಲ್ಕತ್ತಾದಲ್ಲಿ ಸಂಭವಿಸಿದ ಕಾಲ್ತುಳಿತವು ದುಃಖಕರವಾಗಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.
ಪಶ್ಚಿಮ ಬಂಗಾಳ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ.”
**************
The stampede in Kolkata is extremely distressing. My thoughts are with those who have lost their loved ones. May the injured recover at the earliest. The local administration is providing all possible assistance to those affected: PM @narendramodi
— PMO India (@PMOIndia) October 17, 2026
কলকাতায় পদপিষ্ট হয়ে হতাহতের ঘটনা অত্যন্ত মর্মান্তিক। যাঁরা তাঁদের প্রিয়জনকে হারিয়েছেন, তাঁদের প্রতি আমার সমবেদনা রইল। আহতরা যেন দ্রুত সুস্থ হয়ে ওঠেন, সেই কামনা করি। স্থানীয় প্রশাসন ক্ষতিগ্রস্তদের সম্ভাব্য সব ধরনের সহায়তা প্রদান করছে : প্রধানমন্ত্রী @narendramodi
— PMO India (@PMOIndia) October 17, 2026
The Prime Minister has announced an ex-gratia of Rs. 2 lakh from PMNRF would be given to the next of kin of each of those who lost their lives. The injured would be given Rs. 50,000.
— PMO India (@PMOIndia) October 17, 2026
কলকাতায় পদপিষ্ট হয়ে যাঁরা প্রাণ হারিয়েছেন, তাঁদের প্রত্যেকের নিকটাত্মীয়কে প্রধানমন্ত্রীর জাতীয় ত্রাণ তহবিল (PMNRF) থেকে ২ লক্ষ টাকা এককালীন আর্থিক সহায়তা দেওয়ার কথা ঘোষণা করেছেন প্রধানমন্ত্রী। আহতদের প্রত্যেককে ৫০,০০০ টাকা করে আর্থিক সহায়তা দেওয়া হবে।
— PMO India (@PMOIndia) October 17, 2026
The stampede in Kolkata is saddening. Condolences to the bereaved families. Wishing the injured a speedy recovery. The West Bengal Government is providing all possible help to the affected families.
— Narendra Modi (@narendramodi) October 17, 2026
কলকাতায় পদপিষ্টের ঘটনা দু:খজনক। শোকাহত পরিবারগুলির প্রতি সমবেদনা জানাই।আহতদের দ্রুত আরোগ্য কামনা করছি। ক্ষতিগ্রস্ত পরিবারগুলিকে পশ্চিমবঙ্গ সরকার সম্ভাব্য সবধরণের সহায়তা প্রদান করছে।
— Narendra Modi (@narendramodi) October 17, 2026