Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಕರಮ್‌ಜ್ಯೋತಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಏಷ್ಯನ್‌ ಪ್ಯಾರಾ ಗೇಮ್ಸ್‌ 2026 ರ ಮಹಿಳಾ ಡಿಸ್ಕಸ್‌ ಥ್ರೋ ಎಫ್‌ 55 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಸಾಧನೆಯೊಂದಿಗೆ ಕಂಚಿನ ಪದಕ ಗೆದ್ದ ಕರಮ್‌ಜ್ಯೋತಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಪರಿಶ್ರಮ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವು ಹೇಗೆ ಗಮನಾರ್ಹ ಪ್ರಗತಿಗೆ ಕಾರಣವಾಗುತ್ತದೆ ಎಂಬುದಕ್ಕೆ ಅವರ ಕ್ರೀಡಾ ಪ್ರಯಾಣವು ಅದ್ಭುತ ಉದಾಹರಣೆಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

‘‘ಕರಮ್‌ಜ್ಯೋತಿ ಅವರು ಏಷ್ಯನ್‌ ಪ್ಯಾರಾ ಗೇಮ್ಸ್‌ 2026ರ ಮಹಿಳಾ ಡಿಸ್ಕಸ್‌ ಥ್ರೋ ಎಫ್‌ 55 ಸ್ಪರ್ಧೆಯಲ್ಲಿ ವೈಯಕ್ತಿಕ ಅತ್ಯುತ್ತಮ ಸಾಧನೆಯೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಪರಿಶ್ರಮ, ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವು ಹೇಗೆ ಗಮನಾರ್ಹ ಪ್ರಗತಿಗೆ ಕಾರಣವಾಗುತ್ತದೆ ಎಂಬುದಕ್ಕೆ ಅವರ ಕ್ರೀಡಾ ಪ್ರಯಾಣವು ಅದ್ಭುತ ಉದಾಹರಣೆಯಾಗಿದೆ: ಪ್ರಧಾನಮಂತ್ರಿ @narendramodi’’

 

*****