ಏಷ್ಯನ್ ಪ್ಯಾರಾ ಗೇಮ್ಸ್ 2026 ರ ಮಹಿಳೆಯರ 100 ಮೀಟರ್ ಟಿ 12 ಸ್ಪರ್ಧೆಯಲ್ಲಿಅತ್ಯುತ್ತಮ ಸಮಯದೊಂದಿಗೆ ಚಿನ್ನದ ಪದಕ ಗೆದ್ದು ಹೊಸ ದಾಖಲೆ ನಿರ್ಮಿಸಿದ ಸಿಮ್ರಾನ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಅವರ ವೇಗ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆಗೆ ಸಮರ್ಪಣೆ ನಿಜವಾಗಿಯೂ ಶ್ಲಾಘನೀಯ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಮುಂದಿನ ದಿನಗಳಲ್ಲಿ ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
‘‘ಏಷ್ಯನ್ ಪ್ಯಾರಾ ಗೇಮ್ಸ್ 2026ರ ಮಹಿಳೆಯರ 100 ಮೀಟರ್ ಟಿ 12 ಸ್ಪರ್ಧೆಯಲ್ಲಿಅತ್ಯುತ್ತಮ ಸಮಯದೊಂದಿಗೆ ಚಿನ್ನ ಗೆದ್ದು ಹೊಸ ಕ್ರೀಡಾಕೂಟದ ದಾಖಲೆಯನ್ನು ನಿರ್ಮಿಸಿದ್ದಕ್ಕಾಗಿ ಸಿಮ್ರಾನ್ ಅವರಿಗೆ ಅಭಿನಂದನೆಗಳು! ಅವರ ವೇಗ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆಗೆ ಸಮರ್ಪಣೆ ನಿಜವಾಗಿಯೂ ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi’’
*****