ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಸಿಂಗಲ್ಸ್ ಎಸ್‌ಎಲ್ 4 ಪ್ಯಾರಾ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಅಭಿಜೀತ್ ಸಖುಜಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
ಮೊದಲ ಬಾರಿಗೆ ಪೋಡಿಯಂ ವೇದಿಕೆಯನ್ನು ತಲುಪಿರುವುದು ಶ್ಲಾಘನೀಯ ಸಾಧನೆಯಾಗಿದ್ದು, ಇದು ಅವರ ಪ್ರತಿಭೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಕ್ರೀಡೆಯಲ್ಲಿ ಅವರಿಗೆ ಉಜ್ವಲ ಭವಿಷ್ಯವನ್ನು ಹಾರೈಸಿದರು.
ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:
‘‘ಅಭಿಜಿತ್ ಸಖುಜಾ ಅವರಿಗೆ ಭರವಸೆಯ ಪದಾರ್ಪಣೆ!
ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಸಿಂಗಲ್ಸ್ ಎಸ್‌ಎಲ್ 4 ಪ್ಯಾರಾ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಮೊದಲ ಬಾರಿಗೆ ಪೋಡಿಯಂ ವೇದಿಕೆಯನ್ನು ತಲುಪಿರುವುದು ಶ್ಲಾಘನೀಯ ಸಾಧನೆಯಾಗಿದೆ ಮತ್ತು ಅವರ ಪ್ರತಿಭೆ, ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರತಿಬಿಂಬಿಸುತ್ತದೆ. ಕ್ರೀಡೆಯಲ್ಲಿ ಅವರಿಗೆ ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi’’
*****
A promising debut for Abhijeet Sakhuja! Congrats to him for winning the Bronze in the Men's Singles SL4 Para Badminton event at the Asian Para Games 2026. Reaching the podium in his first appearance is a commendable achievement and reflects his talent, dedication and hard work. Wishing him a bright future in the sport: PM @narendramodi
— PMO India (@PMOIndia) October 22, 2026