Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಜೆಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಪುರುಷರ ಡಬಲ್ಸ್ ಕ್ಲಾಸ್ ಎಂಡಿ‌ 4 ಸ್ಪರ್ಧೆಯಲ್ಲಿ ಕಂಚಿನ ಪದಕ ಜಯಿಸಿರುವ ಜೆಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಈ ಸಾಧನೆಯೊಂದಿಗೆ ಕ್ರೀಡಾಕೂಟದ ಈ ವಿಭಾಗದಲ್ಲಿ ಭಾರತಕ್ಕೆ ಮೊಟ್ಟಮೊದಲ ಪದಕ ಲಭಿಸಿದೆ ಎಂದು ತಿಳಿಸುತ್ತಾ ಶ್ರೀ ಮೋದಿ ಅವರು, ಮುಂದಿನ ದಿನಗಳಲ್ಲಿ ಇವರಿಬ್ಬರೂ ಇನ್ನೂ ಹೆಚ್ಚಿನ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್‌ ಪೋಸ್ಟ್‌ ನಲ್ಲಿ ಹೀಗೆ ಹಂಚಿಕೊಂಡಿದೆ: 

“ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಪುರುಷರ ಡಬಲ್ಸ್ ‘ಕ್ಲಾಸ್ ಎಂ ಡಿ 4’ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಜಹಾನ್ ದೊರಬ್ ಮದನ್ ಮತ್ತು ಶುಭಂ ವಾಧ್ವಾ ಅವರಿಗೆ ಅಭಿನಂದನೆಗಳು! ಕ್ರೀಡಾಕೂಟದ ಈ ವಿಭಾಗದಲ್ಲಿ ಭಾರತಕ್ಕೆ ಲಭಿಸಿರುವ ಮೊದಲ ಪದಕ ಇದಾಗಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****