Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎನ್.ವಿ.ಎಸ್ – 03 ಅನ್ನು ಹೊತ್ತ ಜಿ.ಎಸ್.ಎಲ್.ವಿ – ಎಫ್ 18ರ ಯಶಸ್ವೀ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಪ್ರಧಾನಮಂತ್ರಿ ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್.ವಿ.ಎಸ್ -03 ಅನ್ನು ಹೊತ್ತ ಜಿ.ಎಸ್.ಎಲ್.ವಿ -ಎಫ್ 18 ಯಶಸ್ವೀ ಉಡಾವಣೆಗಾಗಿ ಇಸ್ರೋದಲ್ಲಿನ ಭಾರತದ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆ ಸಲ್ಲಿಸಿದರು.

ಭಾರತದ ದೇಶೀಯ ಉಪಗ್ರಹ ನ್ಯಾವಿಗೇಷನ್ ವ್ಯವಸ್ಥೆಯಾದ ನಾವಿಕ್ ಅನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಮಿಷನ್ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ವರ್ಧಿತ ಸಾಮರ್ಥ್ಯಗಳೊಂದಿಗೆ ಸಜ್ಜುಗೊಂಡಿರುವ ಎನ್ ವಿ ಎಸ್-03 ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಭಾರತದ ಸ್ವಾವಲಂಬನೆಯ ಅನ್ವೇಷಣೆಯನ್ನು ಮತ್ತಷ್ಟು ಮುನ್ನಡೆಸುತ್ತದೆ ಮತ್ತು ನಾಗರಿಕರ ಅನುಕೂಲಕ್ಕಾಗಿ ನ್ಯಾವಿಗೇಷನ್ ಸೇವೆಗಳನ್ನು ಬಲಪಡಿಸುತ್ತದೆ.

ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಸಮರ್ಪಣೆ ಮತ್ತು ಜಾಣ್ಮೆಯನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ ಅವರು, ಅವರ ನಿರಂತರ ಸಾಧನೆಗಳು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿವೆ ಎಂದು ಹೇಳಿದರು.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

ಎನ್.ವಿ.ಎಸ್ -03 ಅನ್ನು ಹೊತ್ತ ಜಿ.ಎಸ್.ಎಲ್.ವಿ -ಎಫ್-18ರ ಯಶಸ್ವೀ ಉಡಾವಣೆಗಾಗಿ ಇಸ್ರೋದ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್ ಗಳಿಗೆ ಅಭಿನಂದನೆಗಳು.

ಈ ಮಿಷನ್ ನಮ್ಮ ದೇಶೀಯ ಉಪಗ್ರಹ ನ್ಯಾವಿಗೇಷನ್ ವ್ಯವಸ್ಥೆಯಾದ ನಾವಿಕ್ ಅನ್ನು ಬಲಪಡಿಸುವಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ.

ವರ್ಧಿತ ಸಾಮರ್ಥ್ಯಗಳೊಂದಿಗೆ ಸಜ್ಜುಗೊಂಡ ಎನ್ ವಿ ಎಸ್-03 ನಿರ್ಣಾಯಕ ತಂತ್ರಜ್ಞಾನಗಳಲ್ಲಿ ಸ್ವಾವಲಂಬನೆಯ ನಮ್ಮ ಅನ್ವೇಷಣೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಮತ್ತು ನಮ್ಮ ಜನರಿಗೆ ಪ್ರಯೋಜನವಾಗುವ ನ್ಯಾವಿಗೇಷನ್ ಸೇವೆಗಳನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ಬಾಹ್ಯಾಕಾಶ ವಿಜ್ಞಾನಿಗಳ ಸಮರ್ಪಣೆ ಮತ್ತು ಜಾಣ್ಮೆ ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುತ್ತಲೇ ಇದೆ.

@isro

 

*****