Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕನ್ನಡ ರಾಜ್ಯೋತ್ಸವದಂದು ಕರ್ನಾಟಕದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಕರ್ನಾಟಕವು ಶ್ರೀಮಂತ ಸಂಪ್ರದಾಯಗಳು, ಗಮನಾರ್ಹ ಸಾಧನೆಗಳು ಮತ್ತು ಅಪಾರ ಸಾಧ್ಯತೆಗಳ ನಾಡು. ನಾಡಿನ ಅದ್ಭುತ ಪರಂಪರೆ ಮತ್ತು ಕಾಲಾತೀತ ಪದ್ಧತಿಗಳು ನಮ್ಮ ರಾಷ್ಟ್ರದ ಸಾಂಸ್ಕೃತಿಕ ಚೌಕಟ್ಟನ್ನು ಶ್ರೀಮಂತಗೊಳಿಸಿವೆ.

“ಕರ್ನಾಟಕದ ಜನರು ತಮ್ಮ ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಗಮನಾರ್ಹ ಕೌಶಲ್ಯಗಳ ಮೂಲಕ, ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಏರೋಸ್ಪೇಸ್‌ನಿಂದ ಹಿಡಿದು ಕೃತಕ ಬುದ್ಧಿಮತ್ತೆ, ಸುಧಾರಿತ ಉತ್ಪಾದನೆ ಮತ್ತು ನವೋದ್ಯಮಗಳವರೆಗೆ, ಕರ್ನಾಟಕದ ಜನರು ಮತ್ತೆ ಮತ್ತೆ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ” ಎಂದು ಶ್ರೀ ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ‘ಎಕ್ಸ್’ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು!

ಕರ್ನಾಟಕವು ಶ್ರೀಮಂತ ಪರಂಪರೆ, ಗಮನಾರ್ಹ ಸಾಧನೆಗಳು ಮತ್ತು ಅಪಾರ ಸಾಧ್ಯತೆಗಳ ನಾಡಾಗಿದೆ. ಇದರ ವೈಭವೋಪೇತ ಪಾರಂಪರಿಕ ಶ್ರೇಷ್ಠತೆ ಹಾಗೂ ಸಾರ್ವಕಾಲಿಕ ಆಚಾರ, ವಿಚಾರಗಳು ನಮ್ಮ ದೇಶದ ಸಾಂಸ್ಕೃತಿಕ ಭವ್ಯತೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿವೆ.

ಕರ್ನಾಟಕದ ಜನರು ತಮ್ಮ ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ವಿಶೇಷವಾಗಿ ಭವಿಷ್ಯದ ವಲಯಗಳಲ್ಲಿನ ಅದ್ಭುತ ಕೌಶಲ್ಯಗಳ ಮೂಲಕ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಿಂದ ಹಿಡಿದು ಕೃತಕ ಬುದ್ಧಿಮತ್ತೆ, ಸುಧಾರಿತ ಉತ್ಪಾದನೆ ಹಾಗೂ ಸ್ಟಾರ್ಟ್‌ಅಪ್‌ಗಳವರೆಗೆ, ಕರ್ನಾಟಕದ ಜನರು ತಮ್ಮ ಚಾಣಾಕ್ಷತೆ ಹಾಗೂ ನೈಪುಣ್ಯತೆಯನ್ನು ಪದೇ ಪದೇ ಪ್ರದರ್ಶಿಸಿದ್ದಾರೆ. ಅವರು ಜಾಗತಿಕ ಮಟ್ಟದ ಜಟಿಲ ಸವಾಲುಗಳಿಗೆ ಪರಿಹಾರಗಳನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಈ ವಿಶೇಷ ಸಂದರ್ಭವು ಜನರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ.

 

*****