Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರೈಲು ಸಂಪರ್ಕಕ್ಕೆ ಪ್ರಮುಖ ಉತ್ತೇಜನ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಎಂದು ಉಲ್ಲೇಖಿಸಿದ ಪ್ರಧಾನಮಂತ್ರಿ


ರೈಲು ಸಂಪರ್ಕ ವ್ಯವಸ್ಥೆಗೆ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆ ಪ್ರಮುಖ ಉತ್ತೇಜನ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವರಿಸಿದ್ದಾರೆ.

ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣವನ್ನು ಇನ್ನಷ್ಟು ಅನುಕೂಲಕರವಾಗಿಸುವುದರ ಜೊತೆಗೆ ವಂದೇ ಭಾರತ್‌ ಸ್ಲೀಪರ್‌ ರೈಲು ರಾಜ್ಯಗಳ ನಡುವಿನ ಸಂಪರ್ಕವನ್ನೂ ಬಲಪಡಿಸುವ ಮತ್ತೊಂದು ಮಹತ್ವದ ಉತ್ತೇಜಕವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. ಈ ಸೇವೆಯಿಂದಾಗಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರದಾದ್ಯಂತದ ಜನರಿಗೆ, ವಿಶೇಷವಾಗಿ ಯುವಜನರಿಗೆ, ಐಟಿ ವೃತ್ತಿಪರರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ. 

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:

“ಉತ್ತಮ ರೈಲು ಸಂಪರ್ಕದತ್ತ ಮತ್ತೊಂದು ಹೆಜ್ಜೆ; ಅದೂ ತಂತ್ರಜ್ಞಾನ ಮತ್ತು ನಾವೀನ್ಯತೆಯ ನಗರವಾದ ಬೆಂಗಳೂರಿನಿಂದ!

ಬೆಂಗಳೂರು ಮತ್ತು ಮುಂಬೈ ನಡುವಿನ ಸಂಪರ್ಕ ವ್ಯವಸ್ಥೆಗೆ ‘ವಂದೇ ಭಾರತ್ ಸ್ಲೀಪರ್ ರೈಲು’ ಮಹತ್ವದ ರೂಪಾಂತರವಾಗಲಿದೆ.

ಈ ರೈಲು ಸೇವೆಯಿಂದ ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಿಗೆ ಪ್ರಯೋಜನವಾಗಲಿದ್ದು, ವಿಶೇಷವಾಗಿ ಯುವಜನರು, ಐಟಿ ವೃತ್ತಿಪರರು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಸಿಗಲಿದೆ.”

 

*****