Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

ಮೃತರ ವಾರಸುದಾರರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (ಪಿ ಎಂ ಎನ್‌ ಆರ್‌ ಎಫ್) ನಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಪ್ರಧಾನಮಂತ್ರಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ: 

“ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ಶೋಕದ ಸಮಯದಲ್ಲಿ, ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬದವರಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ ಎಂ ಎನ್ ಆರ್ ಎಫ್) ತಲಾ 2 ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ತಲಾ 50,000 ರೂಪಾಯಿ ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****