Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರಧಾನಮಂತ್ರಿ ಅವರಿಂದ ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಗೌರವ ನಮನ ಮತ್ತು ಜನ್ ಜಾತೀಯ ಗೌರವ ದಿವಸದ ಶುಭಾಶಯ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮದಿನದ ಅಂಗವಾಗಿ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ ಮತ್ತು ‘ಜನ್ ಜಾತೀಯ ಗೌರವ ದಿವಸ’ದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

ಧರ್ತಿ ಆಭಾ ಅವರ ಅಪ್ರತಿಮ ಧೈರ್ಯ, ಹೋರಾಟ ಮತ್ತು ತ್ಯಾಗವನ್ನು ಸ್ಮರಿಸಿರುವ ಪ್ರಧಾನಮಂತ್ರಿಯವರು, ಅವರ ಕೊಡುಗೆಗಳು ಆತ್ಮಗೌರವ, ಸ್ವಾತಂತ್ರ್ಯ ಮತ್ತು ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಪ್ರತಿ ಪೀಳಿಗೆಗೂ ಸ್ಫೂರ್ತಿ ನೀಡುತ್ತಲೇ ಇರಲಿವೆ ಎಂದು ಹೇಳಿದ್ದಾರೆ. ಅವರಿಂದ ಪ್ರೇರಿತರಾಗಿ ತಮ್ಮ ಸರ್ಕಾರವು, ಬುಡಕಟ್ಟು ಸಮುದಾಯದ ಸಹೋದರ ಸಹೋದರಿಯರ ಘನತೆ, ಅವಕಾಶಗಳು ಮತ್ತು ಸಮೃದ್ಧಿಗಾಗಿ ಯಾವುದೇ ಅವಕಾಶ ಕೈಚೆಲ್ಲದಂತೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. ಅಲ್ಲದೆ, ರಾಷ್ಟ್ರ ನಿರ್ಮಾಣದಲ್ಲಿ ಬುಡಕಟ್ಟು ಸಮಾಜ ನೀಡಿರುವ ಅಮೂಲ್ಯ ಕೊಡುಗೆಯನ್ನು ಗೌರವಿಸುವಂತೆ ಅವರು ಎಲ್ಲರಿಗೂ ಕರೆ ನೀಡಿದ್ದಾರೆ.

ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ:

“भगवान बिरसा मुंडा जी की जयंती पर उन्हें समस्त देशवासियों की ओर से मेरा कोटि-कोटि नमन।

आप सभी को इस दिव्य अवसर से जुड़े जनजातीय गौरव दिवस की बहुत-बहुत शुभकामनाएं।

धरती आबा का अदम्य साहस, संघर्ष और बलिदान देश की हर पीढ़ी को स्वाभिमान, स्वतंत्रता और अधिकारों की रक्षा के लिए प्रेरित करता रहेगा।

उनसे प्रेरणा लेकर हमारी सरकार जनजातीय भाई-बहनों के सम्मान, अवसर और समृद्धि के लिए कोई कोर-कसर नहीं छोड़ रही है।

आइए, सभी मिलकर राष्ट्र निर्माण में जनजातीय समाज के बहुमूल्य योगदान को नमन करें।”

 

*****