Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಸ್ಥಾನದ ಕೋಟಾದಲ್ಲಿ ಆದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಅವಘಡದಲ್ಲಿ ಆದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ತೀವ್ರವಾಗಿ ದುಃಖ ವ್ಯಕ್ತಪಡಿಸಿದ್ದಾರೆ. ಶ್ರೀ ಮೋದಿಯವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ನಿಕಟ ಕುಟುಂಬದವರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ಧನವನ್ನು ಘೋಷಿಸಿದ್ದಾರೆ.

ಪ್ರಧಾನ ಮಂತ್ರಿಯವರು X ನಲ್ಲಿ ಪೋಸ್ಟ್ ಮಾಡಿ;

ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ದುರಂತ ಅಪಘಾತದಲ್ಲಿ ಆದ ಜೀವಹಾನಿಯ ಬಗ್ಗೆ ತಿಳಿದು ಬಹಳ ದುಃಖಿತನಾಗಿದ್ದೇನೆ. ಈ ದುಃಖದ ಸಮಯದಲ್ಲಿ ಭಗವಂತ ಮೃತರ ಕುಟುಂಬದವರಿಗೆ ಈ ಆಘಾತವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ.

ಪ್ರತಿಯೊಬ್ಬ ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi

 

*****