Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪಶ್ಚಿಮ ಬಂಗಾಳದಲ್ಲಿ ಕಾಲ್ತುಳಿತದಿಂದ ಆದ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ, 2 ಲಕ್ಷ ರೂಪಾಯಿ ಪರಿಹಾರ ನೀಡಿಕೆಗೆ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಕಾಲ್ತುಳಿತದಿಂದ ಆಗಿರುವ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಕಾಲ್ತುಳಿತದಿಂದ ಆಗಿರುವ ಜೀವ ಹಾನಿಯ ಬಗ್ಗೆ ದುಃಖಿತನಾಗಿದ್ದೇನೆ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬದ ಜೊತೆ ನನ್ನ ಸಂವೇದನೆ ಇದೆ, ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಅವರು ಶೀಘ್ರ ಗುಣಮುಖರಾಗಲಿ. ಎಂದು ಪ್ರಧಾನಿ ಹೇಳಿದ್ದಾರೆ.

ಕಾಲ್ತುಳಿತದಲ್ಲಿ ಸಾವಿಗೀಡಾದವರ ಹತ್ತಿರದ ಬಂಧುಗಳಿಗೆ ಪಿ.ಎಂ.ಎನ್.ಆರ್.ಎಫ್. ನಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲು ಪ್ರಧಾನಮಂತ್ರಿಯವರು ಅನುಮೋದನೆ ನೀಡಿದ್ದಾರೆ.

***

AKT/NT