Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯುನ್ಮಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಸೆರ್ಬಿಯಾ ಮತ್ತು ಭಾರತ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯುನ್ಮಾನ ಕ್ಷೇತ್ರದಲ್ಲಿನ ಸಹಕಾರದ ಉತ್ತೇಜನಕ್ಕಾಗಿ ಸೆರ್ಬಿಯಾ ಮತ್ತು ಭಾರತ ನಡುವೆ ಅಂಕಿತ ಹಾಕಲಾಗಿರುವ ತಿಳಿವಳಿಕೆ ಒಪ್ಪಂದ (ಎಂ.ಓ.ಯು.)ಕ್ಕೆ ಪೂರ್ವನ್ವಯವಾಗಿ ತನ್ನ ಅನುಮೋದನೆ ನೀಡಿದೆ.

ಸೆರ್ಬಿಯಾ ಮತ್ತು ಭಾರತ ನಡುವೆ ಮಾಹಿತಿ ತಂತ್ರಜ್ಞಾನ ಮತ್ತು ವಿದ್ಯುನ್ಮಾನ ಕ್ಷೇತ್ರದಲ್ಲಿ ಸಹಕಾರವನ್ನು ಉತ್ತೇಜಿಸುವುದು ಮತ್ತು ಸಕ್ರಿಯ ಸಹಕಾರವನ್ನು ತ್ವರಿತಗೊಳಿಸುವುದು ಹಾಗೂ ಎರಡೂ ರಾಷ್ಟ್ರಗಳ ಖಾಸಗಿ ಕಾಯಗಳು, ಸಾಮರ್ಥ್ಯ ವರ್ಧನೆ ಸಂಸ್ಥೆಗಳು, ಸರ್ಕಾರಿ ಮತ್ತು ಇತರ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳ ನಡುವೆ ವಿನಿಮಯಕ್ಕೆ ಉತ್ತೇಜನ ನೀಡುವ ಗುರಿಯನ್ನು ಈ ತಿಳಿವಳಿಕೆ ಒಪ್ಪಂದ ಹೊಂದಿದೆ.

*****