Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯ ಕ್ಷೇತ್ರದಲ್ಲಿ ಭಾರತ ಮತ್ತು ಫ್ರಾನ್ಸ್ ನಡುವಿನ ತಿಳಿವಳಿಕೆ ಒಪ್ಪಂದ ಕುರಿತು ಸಂಪುಟಕ್ಕೆ ವಿವರಣೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಗೆ, ತಂತ್ರಜ್ಞಾನ ಅಭಿವೃದ್ಧಿ ಮಂಡಳಿ (ಟಿಡಿಬಿ), ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಫ್ರಾನ್ಸ್ ನ ಸಾರ್ವಜನಿಕ ಹೂಡಿಕೆ ಬ್ಯಾಂಕ್ ಬಿಪಿಐ ಫ್ರಾನ್ಸ್ ನಡುವೆ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿರುವ ಬಗ್ಗೆ ವಿವರಿಸಲಾಯಿತು.

ಈ ತಿಳಿವಳಿಕೆ ಒಪ್ಪಂದವು,ಭಾರತ ಮತ್ತು ಫ್ರಾನ್ಸ್ ನ ಕಂಪನಿಗಳು ಮತ್ತು ಸಂಸ್ಥೆಗಳ ನಡುವೆ ಸಹಯೋಗದ ಮೂಲಕ ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯ ಕ್ಷೇತ್ರದಲ್ಲಿನ ಉತ್ತಮ ಪದ್ಧತಿಗಳ ವಿನಿಮಯ ಮತ್ತು ತ್ವರಿತ ತಂತ್ರಜ್ಞಾನ ವಿನಿಮಯಕ್ಕೆ ಸಂಯೋಜಿತ ಕ್ರಮಗಳ ಸ್ಥಾಪನೆಯ ಖಾತ್ರಿಯನ್ನು ಒದಗಿಸುತ್ತದೆ.

ತಂತ್ರಜ್ಞಾನ ಅಭಿವೃದ್ಧಿ ಮಂಡಳಿ ಮತ್ತು ಬಿಪಿಐ ಫ್ರಾನ್ಸ್ ಮೂಲಕ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಉತ್ತಮ ಪದ್ಧತಿಗಳ ವಿನಿಮಯಕ್ಕೆ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.

***