Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಎರಡು ಕೋಟಿ ದಾಟಿದ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ, ಸಂತಸ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಎರಡು ಕೋಟಿ ದಾಟಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

” ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳ ಸಂಖ್ಯೆ ಎರಡು ಕೋಟಿ ದಾಟಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ!

ಬಡ ಮಹಿಳೆಯರ ಬದುಕಲ್ಲಿ ಗುಣಾತ್ಮಕ ಬದಲಾವಣೆ ತರುವ ಬಲವಾದ ಬದ್ಧತೆಯ ಮಾರ್ಗದರ್ಶನವನ್ನು ಉಜ್ವಲ ಯೋಜನೆ ಹೊಂದಿದೆ.

ನಾನು ಉಜ್ವಲ ಯೋಜನೆಯ ಎಲ್ಲ ಫಲಾನುಭವಿಗಳಿಗೆ ಮತ್ತು ಅದರ ಯಶಸ್ಸಿನ ಖಾತ್ರಿಗೆ ಹಗಲಿರುಳು ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ “, ಎಂದು ಪ್ರಧಾನಿ ತಿಳಿಸಿದ್ದಾರೆ.

***

AKT/AK