ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಬಾಂಗ್ಲಾದೇಶಗಳ ನಡುವೆ ನ್ಯಾಯಾಂಗ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲು ತನ್ನ ಅನುಮೋದನೆ ನೀಡಿದೆ. ಎರಡೂ ರಾಷ್ಟ್ರಗಳ ನ್ಯಾಯಾಂಗದ ನಡುವೆ ಪರಸ್ಪರ ಸಹಕಾರ ಬಲಪಡಿಸಲು, ಉತ್ತೇಜಿಸಲು ಮತ್ತು ಅಭಿವೃದ್ಧಿಪಡಿಸುವ ಗುರಿಯನ್ನು ಇದು ಹೊಂದಿದೆ.
ಈ ತಿಳಿವಳಿಕೆ ಒಪ್ಪಂದವು ಶೈಕ್ಷಣಿಕ ಕಾರ್ಯಕ್ರಮ, ತರಬೇತಿ ಮತ್ತು ಭೇಟಿ ವಿನಿಮಯದ ಮೂಲಕ ನ್ಯಾಯಾಧೀಶರು ಮತ್ತು ಅಧಿಕಾರಿಗಳ ನಡುವೆ ವಿವಿಧ ಹಂತಗಳಲ್ಲಿ ಪರಸ್ಪರ ಸಂವಾದವನ್ನು ಉತ್ತೇಜಿಸುತ್ತದೆ. ಕಾನೂನು ಮತ್ತು ನ್ಯಾಯ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆ ಮತ್ತು ಮಾಹಿತಿಯ ಪರಸ್ಪರ ವಿನಿಮಯವನ್ನೂ ಇದು ಉತ್ತೇಜಿಸುತ್ತದೆ. ಈ ಕ್ಷೇತ್ರದಲ್ಲಿ ಮೂಲಸೌಕರ್ಯ ಮತ್ತು ಮಾಹಿತಿ ತಂತ್ರಜ್ಞಾನದ ಅರಿವಿನ ವಿನಿಮಯಕ್ಕೂ ಇದು ಅವಕಾಶ ಕಲ್ಪಿಸುತ್ತದೆ.